ಜೋಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾ ಅಧ್ಯಕ್ಷರಾಗಿ ಸಿರಿಲ್ ರಾಮಫೊಸಾ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್ ಪಕ್ಷ ಬಹುಮತ ಪಡೆದ ಬಳಿಕ ಅದರ ಮುಖ್ಯಸ್ಥರಾಗಿದ್ದ 66 ವರ್ಷದ ಸಿರಿಲ್ ಅವರು ಅಧ್ಯಕ್ಷರಾಗಿ ಸಂಸತ್ನಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಲಾಫ್ಟಸ್ ವರ್ಸ್ಫೆಲ್ಡ್ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾಗಿದ್ದರು.