ಬೀಜಿಂಗ್: ಟಿಯಾನ್ಜಿನ್ನಲ್ಲಿ ಭಾನುವಾರದಿಂದ ಆರಂಭವಾಗಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಷಿ–ಜಿನ್ಪಿಂಗ್ ಅವರು ಎರಡು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆ ಇದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳಿಂದಾಗಿ ಜಾಗತಿಕ ವ್ಯಾಪಾರ ವ್ಯವಸ್ಥೆಯಲ್ಲಿ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತ ಮತ್ತು ಚೀನಾ ನಡುವಿನ ಸಂಬಂಧವನ್ನು ವೃದ್ಧಿಸಿಕೊಳ್ಳಲು ಉಭಯ ರಾಷ್ಟ್ರಗಳು ಯೋಜಿಸಿರುವಂತೆಯೇ ಈ ಬೆಳವಣಿಗೆ ಮಹತ್ವ ಪಡೆದಿದೆ.

ಜಪಾನ್ನಿಂದ ಟಿಯಾನ್ಜಿನ್ಗೆ ಶನಿವಾರ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಚೀನಾ ಅಧ್ಯಕ್ಷರೊಂದಿಗೆ ಭಾನುವಾರ ಮಧ್ಯಾಹ್ನ ಮೊದಲ ಸಭೆ ನಡೆಸಲಿದ್ದಾರೆ. ಶಾಂಘೈ ಶೃಂಗದ ಔತಣಕೂಟದ ಕಾರ್ಯಕ್ರಮಕ್ಕೂ ಮುನ್ನ ಮತ್ತೊಂದು ಸುತ್ತಿನ ಸಭೆ ನಡೆಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಶೃಂಗದಲ್ಲಿ ಪಾಲ್ಗೊಳ್ಳುವ ಮೋದಿ, ಬಳಿಕ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೂ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.