ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಅಪಾಯದಿಂದ ಪಾರು

Published : 16 ಸೆಪ್ಟೆಂಬರ್ 2024, 2:39 IST
Last Updated : 16 ಸೆಪ್ಟೆಂಬರ್ 2024, 2:39 IST
ಫಾಲೋ ಮಾಡಿ
Comments

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆ‌ದಿದೆ.

ಭಾನುವಾರ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಫ್ಲೋರಿಡಾದ ಗಾಲ್ಫ್ ಕೋರ್ಸ್‌ನ ಹೊರಗೆ ಗಾಲ್ಫ್ ಆಟವಾಡುತ್ತಿದ್ದಾಗ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ.

‌ಟ್ರಂಪ್ ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ. ಅವರಿಗೆ ಗುಂಡು ತಾಗಿಲ್ಲ. ಅವರು ಸುರಕ್ಷಿತವಾಗಿದ್ದಾರೆ ಎಂದು ಟ್ರಂಪ್ ಪ್ರಚಾರದ ವಕ್ತಾರ ಸ್ಟೀವನ್ ಚೆಯುಂಗ್ ತಿಳಿಸಿದ್ದಾರೆ.

‘ನನ್ನ ಸಮೀಪದಲ್ಲಿ ಗುಂಡಿನ ದಾಳಿ ನಡೆದಿವೆ. ನಾನು ಸುರಕ್ಷಿತ ಮತ್ತು ಆರೋಗ್ಯವಾಗಿದ್ದೇನೆ. ಯಾವುದೂ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ. ನಾನು ಎಂದಿಗೂ ಶರಣಾಗುವುದಿಲ್ಲ' ಎಂದು ಟ್ರಂಪ್ ತಮ್ಮ ಬೆಂಬಲಿಗರಿಗೆ ಸಂದೇಶ ಕಳುಹಿಸಿದ್ದಾರೆ.

ದಾಳಿ ನಡೆಸಿದ ವ್ಯಕ್ತಿಯನ್ನು ಶಸ್ತ್ರಾಸ್ತ್ರದೊಂದಿಗೆ ಬಂಧಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಅಧ್ಯಕ್ಷ ಜೋ ಬೈಡನ್‌ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಶ್ವೇತಭವನ ತಿಳಿಸಿದೆ.

'ಟ್ರಂಪ್ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಇಂಟರ್ನ್ಯಾಷನಲ್ ಗಾಲ್ಫ್ ಕ್ಲಬ್‌ನಲ್ಲಿ ಮಾಜಿ ಅಧ್ಯಕ್ಷ ಟ್ರಂಪ್ ಗಾಲ್ಫ್ ಆಡುತ್ತಿದ್ದಾಗ ಗುಂಡಿನ ಸದ್ದು ಕೇಳಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 1:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಬಗ್ಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಮಾಹಿತಿ ನೀಡಲಾಗಿದೆ. ಅವರು (ಟ್ರಂಪ್‌) ಸುರಕ್ಷಿತವಾಗಿದ್ದಾರೆ' ಎಂದು ತಿಳಿದು ನಿರಾಳರಾಗಿದ್ದಾರೆ ಶ್ವೇತಭವನ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2ನೇ ಬಾರಿ ದಾಳಿ:

ಜುಲೈ 13ರಂದು ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್‌ ಟ್ರಂಪ್ ಪರ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಟ್ರಂಪ್ ಬಲ ಕಿವಿಗೆ ಗುಂಡು ತಗುಲಿತ್ತಾದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಭಾನುವಾರ ಮಧ್ಯಾಹ್ನ 2ನೇ ಬಾರಿಗೆ ದಾಳಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT