ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾನ್‌ ಸ್ಫೋಟ: ಇಬ್ಬರು ಮಕ್ಕಳು ಸೇರಿ ಏಳು ಪ್ರಯಾಣಿಕರ ಸಾವು

Published 8 ಜುಲೈ 2023, 14:44 IST
Last Updated 8 ಜುಲೈ 2023, 14:44 IST
ಅಕ್ಷರ ಗಾತ್ರ

ಲಾಹೋರ್‌: ಪೂರ್ವ ಪಾಕಿಸ್ತಾನದಲ್ಲಿ ಶನಿವಾರ ಪ್ರಯಾಣಿಕರ ವ್ಯಾ‌ನ್‌ ಸ್ಫೋಟಗೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಸೇರಿದ್ದಾರೆ. ಎಂಟು ಪ್ರಯಾಣಿಕರಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಪಂಜಾಬ್ ಪ್ರಾಂತ್ಯದ ಸರ್ಗೋಧಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಾಹನದಲ್ಲಿ ಅಳವಡಿಸಲಾದ ದ್ರವೀಕೃತ ಪೆಟ್ರೋಲಿಯಂ ಅನಿಲ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದೆ ಎಂದು ಅಧಿಕಾರಿ ನಬೀಲ್ ಭಟ್ಟಿ ತಿಳಿಸಿದ್ದಾರೆ.

ವ್ಯಾನ್ ತಕ್ಷಣವೇ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ,  ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂರು ದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ.

ಪಂಜಾಬ್ ಹಂಗಾಮಿ ಮುಖ್ಯಮಂತ್ರಿ ಮೊಹ್ಸಿನ್ ನಖ್ವಿ ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT