ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀಲಂಕಾದಲ್ಲಿ ಭಾರಿ ಮಳೆ: 15 ಜನ ಸಾವು, ನಿರಾಶ್ರಿತರಾದ 19 ಸಾವಿರ ನಾಗರಿಕರು

Published 2 ಜೂನ್ 2024, 14:16 IST
Last Updated 2 ಜೂನ್ 2024, 14:16 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಿಂದ 15 ಜನ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಜೋರು ಮಳೆಯಿಂದಾಗಿ 5 ಸಾವಿರಕ್ಕೂ ಹೆಚ್ಚು ಕುಟುಂಬಗಳ 19 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ.

ಕೊಲಂಬೊ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 300 ಮಿಲಿ ಮೀಟರ್‌ ಮಳೆಯಾಗಿದ್ದು ಪ್ರವಾಹಕ್ಕೆ ಕಾರಣವಾಗಿದೆ. 4 ಸಾವಿರಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೀಡಾಗಿದ್ದು 28 ಮನೆಗಳು ನೆಲಸಮವಾಗಿವೆ.

ಶ್ರೀಲಂಕಾ ಸೇನೆ ಏಳು ತಂಡಗಳನ್ನು ರಚಿಸಿ ಬೋಟ್‌ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಇನ್ನೂ ಹಲವೆಡೆ ವಾಯುಪಡೆ ಅಧಿಕಾರಿಗಳು ಹೆಲಿಕಾಪ್ಟರ್‌ ಮೂಲಕ ಜನರನ್ನು ರಕ್ಷಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಮುಂಜಾಗೃತಾ ಕ್ರಮವಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಭೂ ಕುಸಿತದ ಮುನ್ಸೂಚನೆ ಇರುವ ಕಾರಣ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT