ಶಾಂಘೈ: ಚೀನಾದ ಎರಡನೇ ಅತಿ ದೊಡ್ಡ ನಗರ ಶಾಂಘೈನಲ್ಲಿ ಕೋವಿಡ್–19 ಪರಿಸ್ಥಿತಿ ಬಿಗಡಾಯಿಸಿದ್ದು, ಹೊಸದಾಗಿ 12 ಜನರು ಶುಕ್ರವಾರ ಮೃತಪಟ್ಟಿದ್ದಾರೆ. ಗುರುವಾರ (ಏ.21) 11 ಸೋಂಕಿತರು ಮೃತಪಟ್ಟಿದ್ದರು.

ಶಾಂಘೈನಲ್ಲಿ ಕಠಿಣ ಲಾಕ್‌ಡೌನ್ ಜಾರಿಯಲ್ಲಿದ್ದರೂ, ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ನಗರದಲ್ಲಿ ಶುಕ್ರವಾರ ಲಕ್ಷಣ ರಹಿತ 20,634 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಏಪ್ರಿಲ್ 21ರಿಂದೀಚೆಗೆ ಲಕ್ಷಣಸಹಿತ ಸೋಂಕು ಪ್ರಕರಣಗಳ ಸಂಖ್ಯೆ 2,736ಕ್ಕೆ ಏರಿದೆ ಎಂದು ಅಲ್ಲಿನ ಸರ್ಕಾರದ ದಾಖಲೆಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ:ಶಾಂಘೈ: ಏ. 26ರ ವರೆಗೆ ಲಾಕ್‌ಡೌನ್ ವಿಸ್ತರಣೆ

ಮೃತಪಟ್ಟವರೆಲ್ಲರ ಸರಾಸರಿ ವಯಸ್ಸು 88 ಆಗಿದ್ದು, ಅವರೆಲ್ಲ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಶಾಂಘೈ ಅಧಿಕಾರಿಗಳು ತಿಳಿಸಿದ್ದಾರೆ.

ವಯಸ್ಸಾದವರಿಗೆ ತುರ್ತಾಗಿ ಬೂಸ್ಟರ್ ಡೋಸ್ ಲಸಿಕೆ ನೀಡುವುದನ್ನು ಹೆಚ್ಚಿಸುವುದು ಅನಿವಾರ್ಯವಾಗಿರುವ ಕಾರ್ಯತಂತ್ರವಾಗಿದೆ ಎಂದುಶಾಂಘೈ ಕೋವಿಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಆಸ್ಟ್ರೇಲಿಯಾದಸಾರ್ವಜನಿಕ ಆರೋಗ್ಯ ತಜ್ಞ ಜಯ ಡಂಟಾಸ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.