ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶ ತೊರೆದ ಶೇಖ್‌ ಹಸೀನಾ: ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಬಿಡುಗಡೆಗೆ ಆದೇಶ

Published 6 ಆಗಸ್ಟ್ 2024, 2:44 IST
Last Updated 6 ಆಗಸ್ಟ್ 2024, 2:44 IST
ಅಕ್ಷರ ಗಾತ್ರ

ಢಾಕಾ: ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಆದೇಶ ಮಾಡಲಾಗಿದೆ.

ಸೇನೆಯಿಂದ ಮಧ್ಯಂತರ ಸರ್ಕಾರ ರಚನೆಯಾದ ಬಳಿಕ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ಧೀನ್‌ ಅವರು ಜೈಲಿನಲ್ಲಿರುವ ಮಾಜಿ ಪ್ರಧಾನಿ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಸೋಮವಾರ ಆದೇಶಿಸಿದ್ದಾರೆ.

ಶಹಾಬುದ್ಧೀನ್‌ ನೇತೃತ್ವದಲ್ಲಿ ಸೇನಾ ಮುಖ್ಯಸ್ಥ ವಕಾರ್‌–ಉಝ್‌–ಝಮಾನ್‌, ನೌಕಾಪಡೆ, ವಾಯುಪಡೆ ಮುಖ್ಯಸ್ಥರು ಹಾಗೂ ಕೆಲವು ರಾಜಕೀಯ ಪಕ್ಷಗಳ ನಾಯಕರು ಸೋಮವಾರ ಮಹತ್ವದ ಸಭೆ ನಡೆಸಿದ್ದರು. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕಿಯಾಗಿರುವ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು. 

ಅಲ್ಲದೇ, ವಿದ್ಯಾರ್ಥಿಗಳ ಪ್ರತಿಭಟನೆ ಸಂದರ್ಭದಲ್ಲಿ ಬಂಧಿಸಲಾಗಿದ್ದ ಎಲ್ಲರನ್ನೂ ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

78 ವರ್ಷದ ಖಲೀದಾ ಜಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಅವರು ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT