ಬಾಲ್ಟಿಮೋರ್: ಬಾಲ್ಟಿಮೋರ್‌ನಲ್ಲಿ ನಡೆಯುತ್ತಿದ್ದ ಸಭೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ಬಾಲ್ಟಿಮೋರ್‌ನಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅನೇಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ರಿಚರ್ಡ್ ವರ್ಲಿ ಸುದ್ದಿಗಾರರಿಗೆ ತಿಳಿಸಿದರು.
36 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಗಾಯಗೊಂಡವರ ಸ್ಥಿತಿಯು ಸ್ಥಿರವಾಗಿದ್ದು, ಅವರೆಲ್ಲ 22ರಿಂದ 45 ವರ್ಷ ವಯಸ್ಸಿನವರಾಗಿದ್ದಾರೆ ಎಂದು ವರ್ಲಿ ಹೇಳಿದ್ದಾರೆ.
ಮೃತಪಟ್ಟ ವ್ಯಕ್ತಿಯ ಗುರುತನ್ನು ತಕ್ಷಣ ಬಿಡುಗಡೆ ಮಾಡಲಾಗಿಲ್ಲ. ಗುಂಡಿನ ದಾಳಿ ಕುರಿತ ತನಿಖೆಯು ಸೋಮವಾರ ನಡೆಯಿತು.