ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಎಂಬ ಯುವತಿಯ ಕೊಲೆಯ ರೀತಿಯೇ ಬಾಂಗ್ಲಾದೇಶದಲ್ಲಿಯೂ ಮಹಿಳೆಯೊಬ್ಬರ ಕೊಲೆಯಾಗಿರುವುದು ವರದಿಯಾಗಿದೆ.

ಬಾಂಗ್ಲಾದೇಶದ ಖುಲ್ನಾ ಎಂಬಲ್ಲಿ ಕವಿತಾ ರಾಣಿ ಎಂಬ 30 ವರ್ಷದ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಅಬು ಬಕರ್ ಎಂದು ಗುರುತಿಸಲಾಗಿದೆ.

ಮೂರು ವರ್ಷಗಳಿಂದ ಕವಿತಾ ರಾಣಿ ಅಬು ಬಕರ್ನನ್ನು ಪ್ರೀತಿಸುತ್ತಿದ್ದರು. ಆದರೆ, ಇತ್ತೀಚೆಗೆ ಅಬು ಬಕರ್ ಮದುವೆಯಾಗಿದ್ದನ್ನು ತಿಳಿದು, ಪ್ರಶ್ನಿಸಿದ್ದಕ್ಕೆ ಕವಿತಾಳನ್ನು ನವೆಂಬರ್ 7 ರಂದು ಅಬು ಬಕರ್ ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ಕೊಲೆ ಮಾಡಿದ ನಂತರ ಕವಿತಾಳ ದೇಹವನ್ನು ಮೂರು ಭಾಗಗಳಾಗಿ ಕತ್ತರಿಸಿದ್ದಾನೆ. ಬಳಿಕ ಕೈ ಕಾಲನ್ನು ಕಾಲುವೆಗೆ ಎಸೆದು, ಉಳಿದ ಭಾಗವನ್ನು ಮನೆಯಲ್ಲಿ ಅಡಗಿಸಿಟ್ಟಿದ್ದ. ಪೊಲೀಸರು ನವೆಂಬರ್ 7 ರಂದು ಅಬು ಬಕರ್ನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮುಂಬೈ ಮೂಲದ ಅಫ್ತಾಬ್ ಪೂನವಾಲಾ ಎಂಬಾತ 26 ವರ್ಷದ ಶ್ರದ್ಧಾಎಂಬ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ನಗರದ ತುಂಬ ಚೆಲ್ಲಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಮೇ 18ರಂದು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಅಫ್ತಾಬ್ ಪೂನವಾಲ ಪ್ರೇಯಸಿ ಶ್ರದ್ಧಾ ವಾಲ್ಕರ್ ಅವರಕತ್ತುಸೀಳಿ ಕೊಂದಿದ್ದ. ಬಳಿಕ ಆಕೆಯ ದೇಹವನ್ನು ಸುಮಾರು 35 ಭಾಗಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ನಗರದಾದ್ಯಂತ ಹಲವು ದಿನಗಳ ಕಾಲ ಬಿಡಿ ಬಿಡಿಯಾಗಿ ಎಸೆದಿದ್ದ.

ಪಾಕ್ ಪರ ಘೋಷಣೆ:ವಾಕ್ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು ಎಂದ ನಟ ಚೇತನ್ ಅಹಿಂಸಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.