ನವದೆಹಲಿ: 2024ರ ಆಗಸ್ಟ್ನಿಂದ ಬಾಂಗ್ಲಾದೇಶದಲ್ಲಿ 152 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ ಮತ್ತು 23 ಮಂದಿ ಹಿಂದೂಗಳು ಮೃತಪಟ್ಟಿದ್ದಾರೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, ಕಳೆದ ಎರಡು ತಿಂಗಳಲ್ಲಿ (2024 ನವೆಂಬರ್ 26ರಿಂದ 2025ರ ಜನವರಿ 25ರವರೆಗೆ) ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 76 ದಾಳಿ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದ್ದಾರೆ.

ಕಳೆದೆರೆಡು ತಿಂಗಳುಗಳಲ್ಲಿ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಪ್ರಕರಣಗಳ ವಿವರ, ಈ ವೇಳೆ ಗಾಯಗೊಂಡವರು ಹಾಗೂ ಮೃತರ ಸಂಖ್ಯೆ ಜತೆಗೆ ಹಿಂದೂ ದೇಗುಲಗಳ ಮೇಲೆ ನಡೆದ ದಾಳಿಗಳ ಬಗ್ಗೆ ಸರ್ಕಾರವನ್ನು ಕೇಳಲಾಯಿತು.

ಇದಕ್ಕೆ ಉತ್ತರಿಸಿದ ಸಚಿವರು, 'ಆಗಸ್ಟ್ನಿಂದ ಬಾಂಗ್ಲಾದೇಶದಲ್ಲಿ 152 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದೆ. 23 ಹಿಂದೂಗಳು ಮೃತಪಟ್ಟಿರುವುದಾಗಿ ವರದಿಯಾಗಿವೆ' ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. 2024ರ ಡಿಸೆಂಬರ್ 9ರಂದು ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದ ವಿದೇಶಾಂಗ ಕಾರ್ಯದರ್ಶಿ, ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ರಕ್ಷಣೆಯ ಬಗ್ಗೆ ಭಾರತದ ನಿರೀಕ್ಷೆಗಳನ್ನು ಪುನರುಚ್ಚರಿಸಿದ್ದರು ಎಂದು ಸಚಿವರು ತಿಳಿಸಿದ್ದಾರೆ.

ದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳಿಗೆ ಸಂಬಂಧಿಸಿದ 88 ಪ್ರಕರಣಗಳಲ್ಲಿ 70 ಜನರನ್ನು ಬಂಧಿಸಲಾಗಿದೆ ಎಂದು 2024ರ ಡಿಸೆಂಬರ್ 10ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಬಾಂಗ್ಲಾದೇಶ ಸರ್ಕಾರ ಹೇಳಿತ್ತು.
.ಬಾಂಗ್ಲಾದೇಶ | ಮೂರು ಹಿಂದೂ ದೇವಾಲಯಗಳ ಎಂಟು ವಿಗ್ರಹಗಳು ಧ್ವಂಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.