ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರ: ಎಫ್-16 ಯುದ್ಧ ವಿಮಾನ ಪತನ

Published 8 ಮೇ 2024, 16:15 IST
Last Updated 8 ಮೇ 2024, 16:15 IST
ಅಕ್ಷರ ಗಾತ್ರ

ಸಿಂಗಪುರ: ಸಿಂಗಪುರ ವಾಯುಪಡೆಯ ಎಫ್ -16 ಯುದ್ಧ ವಿಮಾನ ಸೇನಾ ವಾಯುನೆಲೆಯಲ್ಲಿ ಟೇಕ್-ಆಫ್ ಆಗುವಾಗ ಪತನಗೊಂಡಿದೆ ಎಂದು ರಕ್ಷಣಾ ಸಚಿವಾಲಯ ಬುಧವಾರ ತಿಳಿಸಿದೆ.

ಮಧ್ಯಾಹ್ನ 12.35ರ ಸುಮಾರಿಗೆ ಟೇಕ್-ಆಫ್ ಆಗುವಾಗ ವಿಮಾನದಲ್ಲಿ ಸಮಸ್ಯೆ ಉಂಟಾಗಿ ಪತನಗೊಂಡಿದೆ. 

ವಿಮಾನವು ತೆಂಗಾಹ್ ವಾಯು ನೆಲೆಯಲ್ಲಿ ಪತನಗೊಂಡಿದ್ದು, ಪೈಲಟ್ ಸುರಕ್ಷಿತವಾಗಿ ಹೊರಬಂದಿದ್ದಾರೆ. ಅವರು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದು, ಇತರ ಯಾವುದೇ ಸಿಬ್ಬಂದಿಗೆ ಗಾಯವಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಘಟನೆಯ ಕುರಿತ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ನೀಡುವುದಾಗಿ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT