ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್‌ ಪ್ರಧಾನಿ ಶಹಬಾಜ್‌ ಶರೀಫ್‌ ಚೀನಾ ಪ್ರವಾಸ

ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ಅವರೊಂದಿಗೆ ಮಾತುಕತೆ
Published 4 ಜೂನ್ 2024, 16:25 IST
Last Updated 4 ಜೂನ್ 2024, 16:25 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ದ್ವಿಪಕ್ಷೀಯ ಸಂಬಂಧ ಉತ್ತಗೊಳಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್‌ ಷರೀಪ್‌ ಚೀನಾಗೆ ಐದು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ.   

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಆಹ್ವಾನದ ಮೇರೆಗೆ ಜೂನ್‌ 4ರಿಂದ 8ರ ವರೆಗೆ ಷರೀಫ್‌ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾರ್ಚ್‌ನಲ್ಲಿ ಪಿಎಂಎನ್‌ಎಲ್‌ ಪಕ್ಷ ಹಾಗೂ ಇತರ ಪಕ್ಷಗಳ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾದ ಶೆಹಬಾಜ್‌ ಷರೀಫ್‌ ಮೊದಲ ಬಾರಿಗೆ ಚೀನಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. 

‘ಚೀನಾ ಭೇಟಿ ವೇಳೆ ಪಾಕ್‌ ಪ್ರಧಾನಿ ಶರೀಫ್‌ ಅವರು ಅಧ್ಯಕ್ಷ ಜಿನ್‌ಪಿಂಗ್‌ ಅವರೊಂದಿಗೆ ಮಾತುಕತೆ ನಡೆಸಲಿದ್ದು, ಚೀನಾ–ಪಾಕಿಸ್ತಾನ ಸಂಬಂಧ ವೃದ್ಧಿಗಾಗಿ ಜಂಟಿ ನೀಲನಕ್ಷೆ ರೂಪಿಸಲಿದ್ದಾರೆ‘ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್‌ ಅವರು ಕಳೆದ ವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT