ಬೀಜಿಂಗ್: ಚೀನಾ– ಭಾರತ ಗಡಿ ವಿವಾದ ಪರಿಹರಿಸಲು ಮೂರನೆಯವರ ಮಧ್ಯಸ್ಥಿಕೆ ಅಗತ್ಯವಿಲ್ಲ. ಉಭಯ ದೇಶಗಳೂ ಈ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿವೆ ಎಂದು ಚೀನಾ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೊ ಲಿಜಿಯನ್ ಅವರು ತಮ್ಮ ನಾಯಕರ ನಡುವೆ ಆಗಿರುವ ಒಪ್ಪಂದವನ್ನುಎರಡೂ ದೇಶಗಳು ಕಾರ್ಯಗತಗೊಳಿಸಿವೆ ಎಂದು ತಿಳಿಸಿದರು.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ– ಚೀನಾ ಗಡಿ ಬಿಕ್ಕಟ್ಟಿನ ಬಗ್ಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಿಜಿಯನ್ ಅವರು, ಈಗ ಗಡಿಯಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.

ಬಿಕ್ಕಟ್ಟನ್ನು ಪರಿಹರಿಸಲು ಅಮೆರಿಕ ಸಿದ್ಧವಿದೆ ಎಂದು ಟ್ರಂಪ್ ಅವರು ಈಚೆಗೆ ಟ್ವೀಟ್‌ನಲ್ಲಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.