ಪೆಶಾವರ: ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಎರಡು ಜಿಲ್ಲೆಗಳಲ್ಲಿ ಪಾಕಿಸ್ತಾನ ಭದ್ರತಾ ಪಡೆ ಒಟ್ಟು ಆರು ಭಯೋತ್ಪಾದಕರನ್ನು ಕೊಂದಿದೆ.
ಟ್ಯಾಂಕ್ ಜಿಲ್ಲೆಯ ಮಂಜೈ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಭಯತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಉತ್ತರ ವಜಿರಿಸ್ತಾನ ಜಿಲ್ಲೆಯ ರಜ್ಮಾಕ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇತರ ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಅಲ್ಲದೆ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನೆಯ ಸಾರ್ವಜನಿಕ ಸಂಬಂಧಗಳ ಆಂತರಿಕ ವಿಭಾಗ (ಐಎಸ್‌ಪಿಆರ್) ತಿಳಿಸಿದೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.