ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಆರೋಗ್ಯ ಸ್ಥಿತಿ ಗಂಭೀರ

Published 18 ಮೇ 2024, 14:08 IST
Last Updated 18 ಮೇ 2024, 14:08 IST
ಅಕ್ಷರ ಗಾತ್ರ

ಪೆಝಿನೊಕ್: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಅವರ ಆರೋಗ್ಯ ಸ್ಥಿತಿಯು ಗಂಭೀರವಾಗಿದ್ದು, ಅವರ ಮೇಲೆ ದಾಳಿ ಮಾಡಿರುವ ಆರೋಪಿಯನ್ನು ನ್ಯಾಯಾಂಗದ ಮುಂದೆ ಹಾಜರುಪಡಿಸಲಾಗಿದೆ.

‘ಗುಂಡಿನ ದಾಳಿಯಿಂದ ಗಾಯಗೊಂಡಿರುವ ಫಿಕೋ ಅವರಿಗೆ ಶುಕ್ರವಾರ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ’ ಎಂದು ಆರೋಗ್ಯ ಸಚಿವ ಝುಝಾನ ಡೊಲಿಂಕೋವ ತಿಳಿಸಿದ್ದಾರೆ. 

ಬುಧವಾರ ಹ್ಯಾಂಡ್ಲೋವದಲ್ಲಿ ಬೆಂಬಲಿಗರ ಸಭೆಯಲ್ಲಿ ಭಾಗಿಯಾಗಿದ್ದ ಫಿಕೋ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆ ನಡೆದ ಸ್ಥಳದಲ್ಲಿದ್ದ ಶಂಕಿತನೊಬ್ಬನನ್ನು ಬಂಧಿಸಲಾಗಿತ್ತು.

ಬಂಧನದ ಬಳಿಕ ಮೊದಲ ಬಾರಿಗೆ ನ್ಯಾಯಾಂಗದ ಮುಂದೆ ಹಾಜರಾಗಿರುವ ಆರೋಪಿಯ ಕುರಿತು ಮಾಹಿತಿಯನ್ನು ಬಹಿರಂಗಪಡಿಸದಂತೆ ಪ್ರಾಸಿಕ್ಯೂಷನ್‌ ಸೂಚನೆ ನೀಡಿದೆ. ಆದರೆ, ‘71 ವರ್ಷ ವಯಸ್ಸಿನ ಆರೋಪಿಯು ಈ ಹಿಂದೆ ಮಾಲ್‌ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ’ ಎಂದು ಕೆಲ ಮಾಧ್ಯಮಗಳ ವರದಿಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT