ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲಂಬಿಯಾ ಅಧ್ಯಕ್ಷರ ಪುತ್ರನ ಬಂಧನ

Published 29 ಜುಲೈ 2023, 14:37 IST
Last Updated 29 ಜುಲೈ 2023, 14:37 IST
ಅಕ್ಷರ ಗಾತ್ರ

ಬೊಗೋಟಾ (ಕೊಲಂಬಿಯಾ):  ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರ ಪುತ್ರ ನಿಕೋಲಸ್‌ ಪೆಟ್ರೊ ಅವರನ್ನು ಕೊಲಂಬಿಯಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಳೆದ ವರ್ಷ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಅಕ್ರಮವಾಗಿ ದೇಣಿಗೆ ಸಂಗ್ರಹಿಸಿರುವ ಆರೋಪ ಇವರ ಮೇಲಿತ್ತು.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೊಗೋಟಾದ ನ್ಯಾಯಾಲಯದ ಆದೇಶದ ಮೇರೆಗೆ ನಿಕೋಲಸ್ ಪೆಟ್ರೋ ಮತ್ತು ಅವರ ಮಾಜಿ ಪತ್ನಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಪ್ರಾಸಿಕ್ಯೂಟರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

‘ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮುಖ್ಯ ಪ್ರಾಸಿಕ್ಯೂಟರ್ ಕಚೇರಿಯು ಕಾನೂನು ಪ್ರಕಾರ ಮುಂದುವರಿಯಬಹುದು. ಗಣರಾಜ್ಯದ ಅಧ್ಯಕ್ಷರಾಗಿ ನಾನು ಈ ಖಾತರಿ ನೀಡುತ್ತೇನೆ’ ಎಂದು ಗುಸ್ಟಾವೊ ಅವರು ದೇಶದ ಜನತೆಗೆ ಭರವಸೆ ನೀಡಿದ್ದಾರೆ.

‘ಒಬ್ಬ ವ್ಯಕ್ತಿಯಾಗಿ ಮತ್ತು ತಂದೆಯಾಗಿ, ಮಗ ಜೈಲಿಗೆ ಹೋಗುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ’ ಎಂದು ಪೆಟ್ರೋ ಅವರು ಸಾಮಾಜಿಕ ಮಾಧ್ಯಮದಲ್ಲಿ ನೋವು ಹಂಚಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT