ಸೋಲ್: ದಕ್ಷಿಣ ಕೊರಿಯಾದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಸತತ ಐದು ದಿನಗಳಿಂದ 100ಕ್ಕಿಂತ ಕಡಿಮೆ ಹೊಸ ಪ್ರಕರಣಗಳು ವರದಿಯಾಗಿವೆ.

ಆದರೆ, ಈ ಐದು ದಿನಗಳು ರಜಾ ದಿನಗಳಾಗಿದ್ದರಿಂದ ಹೆಚ್ಚಿನ ಜನರು ಪ್ರವಾಸ ಕೈಗೊಂಡಿದ್ದರು. ಹಾಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ಹೇಳಿದರು.

ದಕ್ಷಿಣ ಕೊರಿಯಾದಲ್ಲಿ ಈವರೆಗೆ 24,164 ಮಂದಿ ಸೋಂಕಿಗೆ ಒಳಗಾಗಿದ್ದು, 422 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಕೊರಿಯಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಸಂಸ್ಥೆ(ಕೆಡಿಸಿಎ) ತಿಳಿಸಿದೆ.

ಭಾನುವಾರ 73 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 51 ಪ್ರಕರಣಗಳು ರಾಜಧಾನಿ ಸೋಲ್‌ನಲ್ಲಿ ಕಂಡುಬಂದಿದೆ. ಇಲ್ಲಿನಉತ್ತರದ ಪೊಚಿಯೋನ್‌ನಲ್ಲಿರುವ ಸೇನಾ ಘಟಕದ 30 ಸೈನಿಕರಲ್ಲಿ ಸೋಂಕು ದೃಢಪಟ್ಟಿದೆ. ಅಮೆರಿಕ, ಬ್ರಿಟನ್, ರಷ್ಯಾ ಮತ್ತು ಉಜ್ಬೆಕಿಸ್ತಾನದಿಂದ ದಕ್ಷಿಣ ಕೊರಿಯಾಗೆ ಆಗಮಿಸಿದ 9 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಕೆಡಿಸಿಎ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.