ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ಗೆ ಚಾಕು ಇರಿತ

Published 2 ಜನವರಿ 2024, 2:51 IST
Last Updated 2 ಜನವರಿ 2024, 2:51 IST
ಅಕ್ಷರ ಗಾತ್ರ

ಸೋಲ್‌: ದಕ್ಷಿಣ ಕೊರಿಯಾದ ವಿರೋಧ ಪಕ್ಷದ ನಾಯಕ ಲೀ ಜೈ ಮ್ಯೂಂಗ್‌ ಅವರಿಗೆ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುದ್ದಿ ಸಂಸ್ಥೆ ಯೋನ್ ಹಾಪ್ ವರದಿಯಲ್ಲಿ ತಿಳಿಸಿದೆ.

ಲೀ ಜೈ ಮ್ಯೂಂಗ್‌ ಅವರು ಬುಸಾನ್‌ನ ಗಡೆಯೊಕ್ ದ್ವೀಪದಲ್ಲಿ ನಿರ್ಮಾಣವಾಗುತ್ತಿರುವ ಹೊಸ ವಿಮಾನ ನಿಲ್ದಾಣವನ್ನು ವೀಕ್ಷಿಸಲು ತೆರಳಿದ್ದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಲೀ ಜೈ ಮ್ಯೂಂಗ್‌ ಅವರ ಮೇಲೆ ದುಷ್ಕರ್ಮಿ ಚಾಕುವಿನಿಂದ ಇರಿದಿದ್ದಾನೆ. ಇದರಿಂದಾಗಿ ಮ್ಯೂಂಗ್‌ ಅವರ ಕುತ್ತಿಗೆಯ ಎಡಭಾಗಕ್ಕೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಿಂದಲೇ ದಾಳಿಕೋರನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT