ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕೃತ ಗೋಪ್ಯ ಕಾಯ್ದೆ ಪ್ರಕರಣ: ವಿಚಾರಣೆಗೆ ಪಾಕ್ ಸರ್ಕಾರದಿಂದ ವಿಶೇಷ ಕೋರ್ಟ್‌

Published 21 ಆಗಸ್ಟ್ 2023, 13:01 IST
Last Updated 21 ಆಗಸ್ಟ್ 2023, 13:01 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಅಧಿಕೃತ ರಹಸ್ಯ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ವಿಶೇಷ ಕೋರ್ಟ್‌ ಸ್ಥಾಪಿಸಿದೆ.

ಇದರ ಬೆನ್ನಲ್ಲೇ ರಾಜತಾಂತ್ರಿಕ ಮಾಹಿತಿ ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ವಿದೇಶಾಂಗ ಸಚಿವ, ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಅವರ ಆಪ್ತ ಶಾ ಮಹಮ್ಮದ್‌ ಕುರೇಶಿ ಅವರನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರುಪಡಿಸಲಾಯಿತು.

ಕುರೇಶಿ ವಿದೇಶಾಂಗ ಸಚಿವರಾಗಿದ್ದ ಅವಧಿಯಲ್ಲಿ ಅಮೆರಿಕದಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯು ವಿದೇಶಾಂಗ ಇಲಾಖೆಗೆ ಕಳುಹಿಸಿದ್ದ ಸಂದೇಶವನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಅಧಿಕೃತ ರಹಸ್ಯ ಕಾಯ್ದೆ ಅಡಿಯಲ್ಲಿ ಅವರನ್ನು ಫೆಡರಲ್‌ ತನಿಖಾ ಸಂಸ್ಥೆ (ಎಫ್‌ಐಎ) ಶನಿವಾರ ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT