ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ರೇಲ್‌–ಹಮಾಸ್‌ ಸಂಘರ್ಷ: ಭಾರತ ಕಳವಳ

Published 24 ಜನವರಿ 2024, 13:45 IST
Last Updated 24 ಜನವರಿ 2024, 13:45 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಇಸ್ರೇಲ್‌ ಮತ್ತು ಹಮಾಸ್‌ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತದ ಸುತ್ತಮುತ್ತಲಿನ ಪ್ರದೇಶಗಳನ್ನೂ ಒಳಗೊಂಡಂತೆ ಹಿಂದೂ ಮಹಾಸಾಗರದಲ್ಲಿನ ವಾಣಿಜ್ಯ ಸಂಚಾರದ ಸುರಕ್ಷತೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಭಾರತ ಹೇಳಿದೆ.

ಮಧ್ಯಪ್ರಾಚ್ಯ ವಿಷಯಗಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದ ಮುಕ್ತ ಚರ್ಚೆಯಲ್ಲಿ ಭಾರತ ಈ ವಿಷಯವನ್ನು ಪ್ರಸ್ತಾಪಿಸಿದೆ.

‘ಇದು ಭಾರತದ ಇಂಧನ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಕಾಯಂ ಪ್ರತಿನಿಧಿ ಆರ್‌. ರವೀಂದ್ರ ಹೇಳಿದರು.

ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ಹುಥಿ ಬಂಡುಕೋರರು ದಾಳಿ ತೀವ್ರಗೊಳಿಸುತ್ತಿರುವುದಕ್ಕೆ ಅವರು ಕಳವಳ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT