ಕೊಲಂಬೊ: ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಸಜ್ಜಾಗಿರುವಂತೆಯೇ, ನೂತನ ಸಂವಿಧಾನ ರಚನೆಯ ಪ್ರಸ್ತಾವದ ಪರಿಶೀಲನೆಗೆ ಸರ್ಕಾರ ಸಂಪುಟ ಉಪಸಮಿತಿ ರಚಿಸಿದೆ.

ಮುಖ್ಯ ವಿರೋಧ ಪಕ್ಷ ಸಮಗಿ ಜನ ಬಲವೇಗಯಾ (ಎಸ್‌ಜೆಬಿ) ಸರ್ಕಾರದ ವಿರುದ್ಧ ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಹೇಳಿದೆ. ಅಲ್ಲದೆ ಪ್ರಮುಖ ತಮಿಳು ಪಕ್ಷ ಮತ್ತು ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್‌ಪಿ) ಜಂಟಿಯಾಗಿ ಅಧ್ಯಕ್ಷ ಗೊಟಬಯ ರಾಜಪಕ್ಸ ವಿರುದ್ಧ ಅವಿಶ್ವಾಸ ಮಂಡಿಸಲಿವೆ.

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ದೇಶದಲ್ಲಿ ಜನರ ಆಕ್ರೋಶ ಹೆಚ್ಚಿದಂತೆ ಸಂವಿಧಾನಕ್ಕೆ ತಿದ್ದುಪಡಿ ತರುವ ಭರವಸೆಯನ್ನು ಪ್ರಧಾನಿ ಮಹಿಂದಾ ರಾಜಪಕ್ಸ ನೀಡಿದ್ದರು. ಅವಿಶ್ವಾಸ ತೂಗುಗತ್ತಿಯ ನಡುವೆಯೇ ಉಪಸಮಿತಿಯನ್ನು ಇದೀಗ ರಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.