ರಾಮೇಶ್ವರ: ತಮ್ಮಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 16 ಮೀನುಗಾರರನ್ನುಶ್ರೀಲಂಕಾದ ನೌಕಾಪಡೆ ಬಂಧಿಸಿದೆ.
ಎರಡು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಮೀನುಗಾರಿಕೆ ಬಳಿಸಿದ ಎರಡು ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಲ್ಲಿನ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಭಾರತೀಯ ಮೀನುಗಾರರನ್ನು ಬಂಧಿಸಿದ್ದ ಹಲವು ಪ್ರಕರಣಗಳು ನಡೆದಿದ್ದವು.