ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಸಂಸದರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಅವರು 9ನೇ ಬಾರಿ ಸಂಸದರಾಗಿ ಆಯ್ಕೆಯಾಗುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. 1977ರಿಂದ ಸಂಸತ್‌ಗೆ ನಡೆದ ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಶ್ರೀಲಂಕಾದ ಏಕೈಕ ರಾಜಕಾರಣಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ರಾನಿಲ್ ಅವರು ಯುನೈಟೆಡ್ ನ್ಯಾಷನಲ್ ಪಾರ್ಟಿಯನ್ನು (ಯುಎನ್‌ಪಿ) 1994ರಿಂದ ಮುನ್ನಡೆಸುತ್ತಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ದೇಶದ ಸದ್ಯದ ಆರ್ಥಿಕ ದುಃಸ್ಥಿತಿಗೆ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹಾಗೂ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ದುರಾಡಳಿತವೇ ಕಾರಣ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.