ಕೊಲಂಬೊ: ಶ್ರೀಲಂಕಾದಲ್ಲಿ ಅಧ್ಯಕ್ಷರ ಆಯ್ಕೆಗೆ ಮುಂದಿನ ವಾರ ನಡೆಯಲಿರುವ ಚುನಾವಣೆಯಲ್ಲಿಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರಿಗೇಬೆಂಬಲ ನೀಡಲು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ (ಎಸ್ಎಲ್ಪಿಪಿ) ಪಕ್ಷ ಶುಕ್ರವಾರ ನಿರ್ಧರಿಸಿದೆ.
‘ಗೊಟಬಯ ರಾಜಪಕ್ಸ ಅವರ ರಾಜೀನಾಮೆ ಬಳಿಕ ದೇಶದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರಿಗೆ ನಮ್ಮ ಬೆಂಬಲ’ ಎಂದು ಎಸ್ಎಲ್ಪಿಪಿ ಪ್ರಧಾನ ಕಾರ್ಯದರ್ಶಿ ಸಾಗರ ಕರಿಯವಸಂ ಅವರು ತಿಳಿಸಿದ್ದಾರೆ.
ಶ್ರೀಲಂಕಾದಲ್ಲಿ ಜುಲೈ 20ರಂದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಜುಲೈ 19ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪೀಕರ್ ಅಬೆವರ್ದನ ಹೇಳಿದ್ದಾರೆ.