ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

23 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

Published 5 ಫೆಬ್ರುವರಿ 2024, 7:18 IST
Last Updated 5 ಫೆಬ್ರುವರಿ 2024, 7:18 IST
ಅಕ್ಷರ ಗಾತ್ರ

ಕೊಲೊಂಬೊ: ಶ್ರೀಲಂಕಾದ ವ್ಯಾಪ್ತಿಯ ಸಮುದ್ರದಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು 23 ಭಾರತೀಯ ಮೀನುಗಾರನ್ನು ಬಂಧಿಸಿದ್ದು, ಎರಡು ಹಾಯಿದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಡೆಲ್ಫ್ಟ್ ದ್ವೀಪದ ಉತ್ತರ ಭಾಗದ, ಜಾಫ್ನಾ ಪ್ರದೇಶದಿಂದ ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಂಧಿತರನ್ನು ಕಂಕೆಸಂತುರೈ ಬಂದರಿಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಮೈಲೇಡಿ ಫಿಶರೀಸ್ ಇನ್ಸ್‌ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT