ಕೊಲಂಬೊ: ಶ್ರೀಲಂಕಾದಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, ಮಣ್ಣುಕುಸಿತ ಉಂಟಾಗುತ್ತಿದೆ. ಇದರಿಂದಾಗಿ ದ್ವೀಪ ರಾಷ್ಟ್ರದಲ್ಲಿ ಇದುವರೆಗೆ 14 ಮಂದಿ ಸಾವಿಗೀಡಾಗಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ದಿನಗಳ ಹವಾಮಾನವನ್ನು ಆಧರಿಸಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧರಿಸ ಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಭಾನುವಾರದಿಂದ ಭಾರಿ ಮಳೆ ಸುರಿಯುತ್ತಿದ್ದು, ಮನೆಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ರಾಜಧಾನಿ ಕೊಲಂಬೊ ಮತ್ತು ರತ್ನಾಪುರ ಜಿಲ್ಲೆಯಲ್ಲಿ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಮನೆಗಳ ಮೇಲೆ ಮಣ್ಣು ಕುಸಿದು ಇತರ ಮೂವರ ಸತ್ತಿದ್ದು, ಮರ ಬಿದ್ದು ಒಬ್ಬ ಮೃತಪಟ್ಟಿದ್ದಾನೆ.

ಪ್ರವಾಹದಿಂದ 400ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಸೋಮವಾರ ಹೊತ್ತಿಗೆ 5 ಸಾವಿರಕ್ಕೂ ಹೆಚ್ಚು ಮಂದಿಯನ್ನು ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಟಣೆ ತಿಳಿಸಿದೆ. ನೌಕಾ ಪಡೆ ಮತ್ತು ಸೈನ್ಯವನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ.

20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಹೆದ್ದಾರಿಗಳು ಸಂಪೂರ್ಣ ಜಲಾವೃತಗೊಂಡಿವೆ. ನದಿ ಸಮೀಪ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ವಿಪತ್ತು ನಿರ್ವಹಣಾ ಕೇಂದ್ರ ಸೂಚಿಸಿದೆ.

ಕೊಲಂಬೊದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನಗಳ ಮಾರ್ಗವನ್ನು ಬದಲಾಯಿಸಿ ಬೇರೆ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.