ಟೆಹರಾನ್: ದೇಶ ಹೊಂದಿರುವ ಅಣ್ವಸ್ತ್ರಗಳನ್ನು ಪರಿಶೀಲನೆ ನಡೆಸಲು ಮುಂದಾದ ವಿಶ್ವಸಂಸ್ಥೆಯ ಕ್ರಮಕ್ಕೆ ಇರಾನ್ ಕೆಲವು ನಿರ್ಬಂಧಗಳನ್ನು ಹೇರಿದೆ ಎಂದು ಸರ್ಕಾರಿ ಒಡೆತನದ ಟಿ.ವಿ ವಾಹಿನಿ ಮಂಗಳವಾರ ವರದಿ ಮಾಡಿದೆ.

ಅಮೆರಿಕ ಹಾಗೂ ಐರೋಪ್ಯ ದೇಶಗಳು ತನ್ನ ವಿರುದ್ಧ ಜಾರಿಗೊಳಿಸಿರುವ ಆರ್ಥಿಕ ನಿರ್ಬಂಧಗಳನ್ನು ತೆರವು ಮಾಡುವಂತೆ ಒತ್ತಡ ಹೇರುವ ತಂತ್ರದ ಭಾಗವಾಗಿ ಇರಾನ್ ಈ ರೀತಿ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಣ್ವಸ್ತ್ರಗಳ ಪರಿಶೀಲನೆಗೆ ಆಗಮಿಸುವ ಇಂಟರ್‌ನ್ಯಾಷನಲ್ ಅಟೋಮಿಕ್ ಎನರ್ಜಿ ಏಜೆನ್ಸಿಯ (ಐಎಇಎ) ಪರಿಶೀಲನಾ ತಂಡಕ್ಕೆ ಸೀಮಿತ ಅನುಮತಿ ನೀಡುವುದಾಗಿ ಸರ್ಕಾರ ಹೇಳಿದೆ. ಆದರೆ, ಈ ಸೀಮಿತ ಅನುಮತಿಯ ಸ್ವರೂಪ ಹೇಗಿರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದೂ ವಾಹಿನಿ ವರದಿ ಮಾಡಿದೆ.

ಅಣ್ವಸ್ತ್ರಗಳ ಪರಿಶೀಲನೆ ನಡೆಸುವ ಸಂಬಂಧ ಐಎಇಎ ಜೊತೆ ತಾನು ಮಾಡಿಕೊಂಡಿರುವ ಒಪ್ಪಂದವನ್ನು ರದ್ದು ಮಾಡುವುದಾಗಿಯೂ ಇರಾನ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.