ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು ಇರಾನ್ ಸಂಪೂರ್ಣವಾಗಿ ಸ್ಥಗಿತಗೊಳಿಸಿದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಒಂದು ವೇಳೆ ಹಾರ್ಮುಜ್ ಜಲಸಂಧಿ ಮೂಲಕ ಸರಬರಾಜು ಆಗುವ ಕಚ್ಚಾ ತೈಲವನ್ನು ಸಂಪೂರ್ಣವಾಗಿ ನಿಲ್ಲಿಸಿದರೆ, ಇಲ್ಲಿಯವರೆಗೆ ಅನುಭವಿಸಿದ್ದಕ್ಕಿಂತ ಇಪ್ಪತ್ತು ಪಟ್ಟು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ‘ಟ್ರೂತ್’ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
.ಬಾರಾಮತಿ ವಿಮಾನ ದುರಂತ: ಪೈಲಟ್ ಮೇಲೆ ಆರೋಪ ಹೊರಿಸಲು VK ಸಿಂಗ್ ಯತ್ನ; ರೋಹಿತ್.ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದ ಸರ್ಕಾರ: ಕರ್ನಾಟಕ ಕ್ರೈಸ್ತ ಸಂಘಟನೆ .
ಹಾರ್ಮುಜ್ ಜಲಸಂಧಿ ಮಾರ್ಗವನ್ನು ಸ್ಥಗಿತಗೊಳಿಸಲು ಮುಂದಾದರೆ ಇರಾನ್ಗೆ ವಿನಾಶದ ದಿನಗಳು ಎದುರಾಗಲಿವೆ. ನಮ್ಮ ದಾಳಿಗಳು ಎಷ್ಟು ಪ್ರಬಲವಾಗಿರುತ್ತದೆ ಎಂದರೆ ಇರಾನ್ ಮತ್ತೆ ಒಂದು ರಾಷ್ಟ್ರವಾಗಿ ತಲೆ ಎತ್ತಲು ಅಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ತೈಲ ಪೂರೈಕೆಗಾಗಿ ಈ ಮಾರ್ಗವನ್ನು ಹೆಚ್ಚು ಅವಲಂಬಿಸಿರುವ ದೇಶಗಳಿಗೆ ಹಾರ್ಮುಜ್ ಜಲಸಂಧಿಯ ಮಾರ್ಗ ತೆರೆದಿಡುವುದರಿಂದ ಪ್ರಯೋಜನವಾಗುತ್ತದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮೂಲಕ ಸೌದಿ ಅರೇಬಿಯಾ, ಇರಾಕ್, ಯುಎಇಯಿಂದ ಭಾರತಕ್ಕೆ ಕಚ್ಚಾ ತೈಲ ಮತ್ತು ಎಲ್ಎನ್ಜಿ ಪೂರೈಕೆಯಾಗುತ್ತಿದೆ. ಈ ಮಾರ್ಗದಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡರೆ ಕಚ್ಚಾ ತೈಲದ ಬೆಲೆ ಏರಿಕೆಯಾಗಲಿದೆ. ಇದು ಹಣದುಬ್ಬರದ ಹೆಚ್ಚಳಕ್ಕೂ ಕಾರಣವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.