ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಸಿಫಿಕ್ ದ್ವೀಪ ಸಮೂಹದಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

Last Updated 8 ಜನವರಿ 2023, 14:13 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಪೆಸಿಫಿಕ್‌ ಸಾಗರದಲ್ಲಿರುವ ವನೌತು ದ್ವೀಪ ಸಮೂಹದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಭಾನುವಾರ ಸಂಭವಿಸಿದೆ. ಇದು ಈ ಪ್ರದೇಶದಲ್ಲಿ ಸುನಾಮಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಅಮೆರಿಕ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆ ಎಚ್ಚರಿಸಿದೆ.

ವನೌತುವಿನ ಪೋರ್ಟ್‌ ಒರ್ಲಿ ಎಂಬಲ್ಲಿಂದ ಸುಮಾರು 23 ಕಿಲೋಮೀಟರ್‌ ದೂರದಲ್ಲಿ ಹಾಗೂ ಸಾಗರದ 27 ಕಿಲೋಮೀಟರ್‌ ಆಳದಲ್ಲಿ ಭೂಕಂಪನದ ಕೇಂದ್ರ ಇದೆ ಎಂದು ಇಲಾಖೆ ತಿಳಿಸಿದೆ.

ಪೆಸಿಫಿಕ್‌ ಸುನಾಮಿ ಎಚ್ಚರಿಕೆ ಕೇಂದ್ರವು, ಭೂಕಂಪನ ಕೇಂದ್ರದ ಸುಮಾರು 300 ಕಿಲೋಮೀಟರ್‌ ವ್ಯಾಪ್ತಿಯ ಕರಾವಳಿ ಪ್ರದೇಶಗಳಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. ಯಾವುದೇ ಹಾನಿಯಾಗಿರುವ ಬಗ್ಗೆ ಈವರೆಗೆ ವರದಿಯಾಗಿಲ್ಲ.

ವನೌತುವಿನಲ್ಲಿ ಸುಮಾರು 2.8 ಲಕ್ಷ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಭೂಕಂಪ, ಜ್ವಾಲಾಮುಖಿ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳು ನಿರಂತವಾಗಿ ಸಂಭವಿಸುತ್ತಿರುವುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT