ಕಾಬೂಲ್: ಆಫ್ಗಾನಿಸ್ಥಾನದಲ್ಲಿ ಬುಧವಾರ ಎರಡು ಕಡೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು ಆರು ಮಂದಿ ಪೊಲೀಸರು ಸಾವಿಗೀಡಾಗಿದ್ದಾರೆ.

ಕಂದಹಾರ್ನ ದಕ್ಷಿಣ ಪ್ರಾಂತ್ಯದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ಕೇಂದ್ರ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಟ್ರಕ್ನಲ್ಲಿ ಬಂದಿದ್ದ ದಾಳಿಕೋರನು ಕಚೇರಿ ಸಮೀಪ ಸ್ಫೋಟಿಸಿಕೊಂಡಿದ್ದಾನೆ.

ಘಜನಿಯ ಪೂರ್ವ ಪ್ರಾಂತ್ಯದಲ್ಲಿರಸ್ತೆ ಬದಿ ನಡೆದ ಮತ್ತೊಂದು ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ.

ತಾಲಿಬಾನ್, ಎರಡೂ ದಾಳಿಗಳ ಹೊಣೆ ಹೊತ್ತುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.