ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಮಾಲಿಯಾ: ಆತ್ಮಾಹುತಿ ಬಾಂಬ್‌ ದಾಳಿ, 30 ಸೈನಿಕರು ಸಾವು

Published 24 ಜುಲೈ 2023, 15:46 IST
Last Updated 24 ಜುಲೈ 2023, 15:46 IST
ಅಕ್ಷರ ಗಾತ್ರ

ಮೊಗದಿಶು: ಸೊಮಾಲಿಯಾ ರಾಜಧಾನಿ ಮೊಗದಿಶುನಲ್ಲಿ ಇರುವ ಸೇನಾ ಅಕಾಡೆಮಿಯ ಮೇಲೆ ಸೋಮವಾರ ವ್ಯಕ್ತಿಯೊಬ್ಬ ನಡೆಸಿದ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಕನಿಷ್ಠ 30 ಸೈನಿಕರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲ್‌ ಶಬಾಬ್‌ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿದೆ.

ಕಳೆದ ವರ್ಷ ಸರ್ಕಾರದ ಪಡೆಗಳು ಮತ್ತು ಮಿತ್ರ ಪಡೆಗಳು ಜಂಟಿಯಾಗಿ ನಡೆಸಿದ ಸೇನಾ ಕಾರ್ಯಾಚರಣೆಯಲ್ಲಿ ಅಲ್‌–ಕೈದಾ ಸಂಪರ್ಕ ಹೊಂದಿರುವ ದೊಡ್ಡ ಗುಂಪನ್ನು ದಕ್ಷಿಣ ಸೊಮಾಲಿಯಾದಿಂದ ಹೊರಗೆ ಕಳುಹಿಸಲಾಗಿತ್ತು. ಆದಾಗಿಯೂ ಭಯೋತ್ಪಾದಕರು ಈ ಪ್ರದೇಶದಲ್ಲಿ ದಾಳಿ ಮುಂದುವರಿಸಿದ್ದರು. ಇತ್ತೀಚೆಗೆ ಇಲ್ಲಿ ಸೇನಾ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಇದೇ ವೇಳೆ ಅಲ್ ಶಬಾಬ್‌ ಉಗ್ರರು ದಾಳಿ ನಡೆಸಿದ್ದಾರೆ.

‘ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ 73 ಸೈನಿಕರು ಮೃತಪಟ್ಟಿದ್ದಾರೆ ಮತ್ತು 124 ಮಂದಿ ಗಾಯಗೊಂಡಿದ್ದಾರೆ’ ಎಂದು ಉಗ್ರ ಸಂಘಟನೆ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT