ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬುಧಾಬಿಯ ಹಿಂದೂ ದೇಗುಲ ಉದ್ಘಾಟನೆಯಲ್ಲಿ ಭಾಗಿಯಾದ ಸಂಸದೆ ಸುಮಲತಾ ಅಂಬರೀಶ್‌

Published 15 ಫೆಬ್ರುವರಿ 2024, 10:25 IST
Last Updated 15 ಫೆಬ್ರುವರಿ 2024, 10:25 IST
ಅಕ್ಷರ ಗಾತ್ರ

ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣಗೊಂಡ ಮೊದಲ ಹಿಂದೂ ದೇಗುಲದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಭಾಗಿಯಾಗಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ‘ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನಾವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್​ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ ಎಂದಿದ್ದಾರೆ.

ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ. ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ. ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳು’ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ (ಫೆ.14) ಅಬುಧಾಬಿಯ ಹಿಂದೂ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ.

ವೈಜ್ಞಾನಿಕ ತಂತ್ರಗಳೊಂದಿಗೆ, ಪ್ರಾಚೀನ ವಾಸ್ತು ಶಿಲ್ಪದ ಶೈಲಿಗಳನ್ನು ಅಳವಡಿಸಿಕೊಂಡು ಇದನ್ನು ನಿರ್ಮಿಸಲಾಗಿದೆ. ದುಬೈ– ಅಬುಧಾಬಿ ಶೇಖ್‌ ಜಾಯೆದ್‌ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು ₹ 700 ಕೋಟಿ ವೆಚ್ಚದಲ್ಲಿ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT