ಯಾಂಗೂನ್: ‘ಮಯನ್ಮಾರ್ ರಾಷ್ಟ್ರೀಯ ಸಂಸತ್‌ನ ಮೇಲ್ಮನೆ ಮತ್ತು ಕೆಳಮನೆಯ 642 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸಿದ್ದು, ನಾವು ಮತ್ತೊಮ್ಮೆ ಅಧಿಕಾರಕ್ಕೇರಲಿದ್ದೇವೆ’ ಎಂದು ಆಡಳಿತಾರೂಢ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ (ಎನ್‌ಎಲ್‌ಡಿ) ಪಕ್ಷದ ವಕ್ತಾರ ಮೊನಿವಾ ಆಂಗ್ ಶಿನ್ ಸೋಮವಾರ ತಿಳಿಸಿದ್ದಾರೆ.

ಆದರೆ ಚುನಾವಣಾ ಆಯೋಗ ಇನ್ನೂ ಅಂತಿಮ ಫಲಿತಾಂಶ ಪ್ರಕಟಿಸಿಲ್ಲ.

‘ನಾವು377 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದ್ದೆವು. ಈಗಿನ ಫಲಿತಾಂಶವನ್ನು ನೋಡಿದರೆ ನಮಗೆ ಇದಕ್ಕಿಂತಲೂ ಹೆಚ್ಚಿನ ಸ್ಥಾನಗಳು ಲಭಿಸುವ ಸಾಧ್ಯತೆ ಇದೆ’ ಎಂದು ಅವರು ಹೇಳಿದ್ದಾರೆ.

ಆಂಗ್ ಸಾನ್ ಸೂಕಿ ನೇತೃತ್ವದ ಎನ್‌ಎಲ್‌ಡಿ ಪರ ಹೆಚ್ಚು ಒಲವು ಇದ್ದು ಈ ಪಕ್ಷವೇ ಮತ್ತೊಮ್ಮೆ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ರಾಜಕೀಯ ವಿಶ್ಲೇಷಕರು ಈಗಾಗಲೇ ತಿಳಿಸಿದ್ದಾರೆ.

ಚುನಾವಣೆಯಲ್ಲಿ 90ಕ್ಕೂ ಅಧಿಕ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಹಿಂದಿನ ಚುನಾವಣೆಯಲ್ಲಿ ಸೂಕಿ ನೇತೃತ್ವದಎನ್‌ಎಲ್‌ಡಿ, ಭಾರಿ ಬಹುಮತದಿಂದ ಜಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.