ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈವಾನ್​ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ: 200 ಬಾರಿ ಕಂಪಿಸಿದ ಭೂಮಿ

Published 23 ಏಪ್ರಿಲ್ 2024, 12:44 IST
Last Updated 23 ಏಪ್ರಿಲ್ 2024, 12:44 IST
ಅಕ್ಷರ ಗಾತ್ರ

ತೈಪೆ: ತೈವಾನ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇದು ರಿಕ್ಟರ್ ಮಾಪನದಲ್ಲಿ 6.3ರಷ್ಟಿದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಇಲ್ಲಿನ ಪೂರ್ವ ಕರಾವಳಿಯಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಮಧ್ಯಾಹ್ನದ ನಡುವೆ ಸುಮಾರು 200ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿದೆ ಎಂದು ತೈವಾನ್ ಕೇಂದ್ರೀಯ ಹವಾಮಾನ ಇಲಾಖೆಯನ್ನು ಉಲ್ಲೇಖಿಸಿ ಎನ್‌ಡಿ ಟಿವಿ ವರದಿ ಮಾಡಿದೆ.

ಪ್ರಬಲ ಭೂಕಂಪದಿಂದಾಗಿ ರಾಜಧಾನಿ ತೈಪೆ ಸೇರಿದಂತೆ ಉತ್ತರ, ಪೂರ್ವ ಮತ್ತು ಪಶ್ಚಿಮ ತೈವಾನ್‌ನಲ್ಲಿ ಬೃಹತ್ ಕಟ್ಟಡಗಳು ಜಖಂಗೊಂಡಿವೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. 

ಇದೇ ಏಪ್ರಿಲ್ 3 ರಂದು 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಘಟನೆಯಲ್ಲಿ ಕನಿಷ್ಠ 14 ಜನರು ಮೃತಪಟ್ಟಿದ್ದರು. ಅಂದಿನಿಂದ ತೈವಾನ್ ಜನರು ಸುಮಾರು ಸಾವಿರಕ್ಕೂ ಹೆಚ್ಚು ಬಾರಿ ಭೂಕಂಪನವನ್ನು ಅನುಭವಿಸಿದ್ದಾರೆ.

2016ರಲ್ಲಿ ದಕ್ಷಿಣ ತೈವಾನ್‌ನಲ್ಲಿ ಸಂಭವಿಸಿದ ಭೂಕಂಪದಲ್ಲಿ 100ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. 1999ರಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಘಟನೆಯಲ್ಲಿ 2,000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT