ಇಸ್ಲಾಮಾಬಾದ್: ಅಫ್ಗಾನಿಸ್ತಾನದಲ್ಲಿ ಮಹಿಳೆಯರ ಜೀವನ ಸುಧಾರಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಾಲಿಬಾನ್ ಪರಮೋಚ್ಚ ನಾಯಕ ಹಿಬತುಲ್ಲಾ ಅಖುಂದ್‌ಝದಾ ಭಾನುವಾರ ಸಂದೇಶ ಬಿಡುಗಡೆ ಮಾಡಿದ್ದಾರೆ.
ಒತ್ತಾಯದ ವಿವಾಹ ಸೇರಿದಂತೆ ಸಾಂಪ್ರದಾಯಿಕ ಕಟ್ಟಲೆಗಳಿಂದ ಮಹಿಳೆಯರ ರಕ್ಷಣೆಗೆ ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಹಿಳೆಯರು ಧರಿಸುವ ಹಿಜಾಬ್ ಕುರಿತಂತೆ ಈ ಹಿಂದಿನ 20 ವರ್ಷಗಳ ತಾಲಿಬಾನ್ ಆಡಳಿತದಲ್ಲಿ ಇದ್ದ ಆಚರಣೆಗಳು ಶೀಘ್ರವೇ ಕೊನೆಗೊಳ್ಳಲಿವೆ ಎಂದೂ ತಿಳಿಸಿದ್ದಾರೆ.
ಅಫ್ಗನ್‌ನಲ್ಲಿ ಮಹಿಳೆಯರ ಸಾರ್ವಜನಿಕ ಜೀವನ, ಉದ್ಯೋಗ ಮತ್ತು ಶಿಕ್ಷಣಕ್ಕೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ನೆಲೆಸಿರುವ ಅಖುಂದ್‌ಝದಾ ವಿರಳವಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಇವರ ಸುತ್ತಲೂ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸುವ ವಿದ್ವಾಂಸರು ಸುತ್ತುವರಿದಿರುತ್ತಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.