ಕಾಬೂಲ್: ಅಫ್ಗಾನಿಸ್ತಾನದಲ್ಲಿ ಸರ್ಕಾರ ರಚಿಸಿದ ನಂತರ ತಾಲಿಬಾನ್ ನಾಯಕರು ಇದೇ ಮೊದಲ ಬಾರಿಗೆ ಕಾಬೂಲ್‌ನಲ್ಲಿರುವ ಬ್ರಿಟನ್ ರಾಜತಾಂತ್ರಿಕ ಅಧಿಕಾರಿಗಳನ್ನು ಮಂಗಳವಾರ ಭೇಟಿಯಾಗಿದ್ದಾರೆ.

ತಾಲಿಬಾನ್ ನಾಯಕರು ಬ್ರಿಟನ್ ಅಧಿಕಾರಿಗಳನ್ನು ಭೇಟಿ ಮಾಡಿರುವುದರಿಂದ ಪ್ರಸ್ತುತ ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ, ಆಹಾರದ ಕೊರತೆಯಂತಹ ಸಮಸ್ಯೆಗಳಿಗೆ ಒಂದಷ್ಟು ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ಭಾವಿಸಲಾಗಿದೆ.

ಬ್ರಿಟನ್ ಅಧಿಕಾರಿಗಳನ್ನು ಭೇಟಿಯಾಗುವ ಮುನ್ನ, ತಾಲಿಬಾನ್ ನಾಯಕರು ಇರಾನ್ ನಿಯೋಗವನ್ನು ಭೇಟಿಯಾಗಿ ವ್ಯಾಪಾರ ಒಪ್ಪಂದಗಳು ಸೇರಿದಂತೆ ಅಫ್ಗಾನಿಸ್ತಾನದಲ್ಲಿನ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯವಾದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಈ ಮಧ್ಯೆ, ಇಸ್ಲಾಮಿಕ್ ಸ್ಟೇಟ್ (ಐಸಿಸ್) ಗುಂಪಿನ 11 ಸದಸ್ಯರನ್ನು ಬಂಧಿಸಿರುವುದಾಗಿ ತಾಲಿಬಾನ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.