ಜಾಗತಿಕ ವ್ಯವಹಾರದಲ್ಲಿ ಭಾರತದ ಪ್ರಾಬಲ್ಯ: ವ್ಲಾದಿಮಿರ್ ಪುಟಿನ್ ಶ್ಲಾಘನೆ
ಮಾಸ್ಕೋ: ‘ಜಾಗತಿಕ ವ್ಯವಹಾರಗಳಲ್ಲಿ ಭಾರತವು ಸ್ಪಷ್ಟವಾದ ಪ್ರಾಬಲ್ಯ ಹೊಂದಿದೆ’ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಪ್ರಮುಖ ವಿಚಾರಗಳಲ್ಲಿ ಭಾರತವು ಸಕ್ರಿಯ ಪಾತ್ರವನ್ನು ಉಲ್ಲೇಖಿಸಿ ಈ ಅಭಿಪ್ರಾಯಪಟ್ಟಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂದೇಶ ಕಳುಹಿಸಿರುವ ಅವರು ‘ಎರಡು ರಾಷ್ಟ್ರಗಳ ನಡುವೆ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ರಷ್ಯಾ ಬದ್ಧವಾಗಿದೆ’ ಎಂದು ಪುಟಿನ್ ಒತ್ತಿ ಹೇಳಿದ್ದಾರೆ. ‘ಜಾಗತಿಕ ವ್ಯವಹಾರಗಳಲ್ಲಿ ಭಾರತವು ಸ್ಪಷ್ಟವಾದ ಪ್ರಾಬಲ್ಯ ಹೊಂದಿದೆ. ಹಲವು ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಸಕ್ರಿಯವಾಗಿ ಭಾಗವಹಿಸಿದೆ’ ಎಂದು ತಿಳಿಸಿದ್ದಾರೆ.