ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟ್ರಂಪ್ ಜತೆಗಿನ ಚರ್ಚೆ ಬೆನ್ನಲ್ಲೇ ಕಮಲಾಗೆ ಬೆಂಬಲ ಸೂಚಿಸಿದ ಅಮೆರಿಕದ ಗಾಯಕಿ ಟೇಲರ್

Published : 11 ಸೆಪ್ಟೆಂಬರ್ 2024, 4:42 IST
Last Updated : 11 ಸೆಪ್ಟೆಂಬರ್ 2024, 4:42 IST
ಫಾಲೋ ಮಾಡಿ
Comments

ವಾಷಿಂಗ್ಟನ್: ‘ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುತ್ತೇನೆ’ ಎಂದು ಅಮೆರಿಕದ ಖ್ಯಾತ ಗಾಯಕಿ ಟೇಲರ್ ಸ್ವಿ‌ಫ್ಟ್ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಮಂಗಳವಾರ ರಾತ್ರಿ ಫಿಲಡೆಲ್ಫಿಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಪರಸ್ಪರ ಮುಖಾಮುಖಿಯಾಗಿದ್ದರು.

ಉಭಯ ನಾಯಕರ ನಡುವಿನ ಚರ್ಚಾ ಕಾರ್ಯಕ್ರಮ ಮುಗಿದ ಕೆಲವೇ ಗಂಟೆಗಳಲ್ಲಿ ಸ್ವಿ‌ಫ್ಟ್ ಅವರು ಕಮಲಾ ಹ್ಯಾರಿಸ್ ಅವರನ್ನು ಅನುಮೋದಿಸುವುದಾಗಿ ಪ್ರಕಟಿಸಿದ್ದಾರೆ. ಇದರೊಂದಿಗೆ ಹ್ಯಾರಿಸ್‌ ಅವರಿಗೆ ಸೆಲೆಬ್ರಿಟಿಗಳ ಬೆಂಬಲವು ಸಿಕ್ಕಂತಾಗಿದೆ ಎಂದು ವಿಶ್ಲೇಷಿಸಲಾಗಿದೆ.

ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಟೇಲರ್ ಸ್ವಿ‌ಫ್ಟ್ ಅವರು ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ‘ನಿಮ್ಮಂತೆಯೇ ನಾನು ಕೂಡ ಚರ್ಚೆಯನ್ನು ವೀಕ್ಷಿಸಿದ್ದೇನೆ. 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ನಾನು ಕಮಲಾ ಹ್ಯಾರಿಸ್ ಮತ್ತು ಟಿಮ್ ವಾಲ್ಜ್ ಅವರನ್ನು ಬೆಂಬಲಿಸುತ್ತೇನೆ. ನಾನು ಕಮಲಾ ಹ್ಯಾರಿಸ್‌ ಅವರಿಗೆ ಮತ ಹಾಕುತ್ತಿದ್ದೇನೆ. ಏಕೆಂದರೆ ಅವರು ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾರೆ. ಹಾಗಾಗಿ ಎಲ್ಲರೂ ಸೇರಿ ಅವರನ್ನು ಚಾಂಪಿಯನ್ ಮಾಡೋಣ’ ಎಂದು ಬರೆದುಕೊಂಡಿದ್ದಾರೆ.

ನವೆಂಬರ್‌ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತ ಮೂಲದ 59 ವರ್ಷದ ಹ್ಯಾರಿಸ್ ಅವರು 78 ವರ್ಷದ ಡೊನಾಲ್ಡ್ ಟ್ರಂಪ್ ಅವರನ್ನು ಎದುರಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT