ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ಧರಿಸಿದ್ದಕ್ಕಾಗಿ ಭಯಭೀತಗೊಳಿಸುವುದು ದಬ್ಬಾಳಿಕೆ: ಪಾಕಿಸ್ತಾನದ ಸಚಿವ 

Last Updated 9 ಫೆಬ್ರುವರಿ 2022, 6:40 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಕರ್ನಾಟಕದ ಹಿಜಾಬ್ ವಿವಾದದ ಕುರಿತಂತೆ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮೂಲಭೂತ ಮಾನವ ಹಕ್ಕುಗಳ ಘೋರ ಉಲ್ಲಂಘನೆಯಾಗಿದೆ. ಯಾರಿಗಾದರೂ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸಿದ್ದಕ್ಕಾಗಿ ಅವರನ್ನು ಭಯಭೀತಗೊಳಿಸುವುದು ಸಂಪೂರ್ಣವಾಗಿ ದಬ್ಬಾಳಿಕೆಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ರಾಜ್ಯದಲ್ಲಿ ತಾರಕಕ್ಕೇರಿದ್ದು, ಸದ್ಯ ಮೂರು ದಿನ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.

ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್‌ ಝೈ ಸಹ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT