ಲಾಹೋರ್: ನಿಷೇಧಿತ ತೆಹ್ರಿಕ್– ಇ–ತಾಲಿಬಾನ್ ಪಾಕಿಸ್ತಾನ(ಟಿಟಿಪಿ) ಸಂಘಟನೆಯ 21 ಭಯೋತ್ಪಾದಕರನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದಲ್ಲಿ 200ಕ್ಕೂ ಅಧಿಕ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಂಜಾಬ್ ಪೊಲೀಸರ ಭಯೋತ್ಪಾದನಾ ನಿಗ್ರಹ ವಿಭಾಗದ ಪ್ರಕಟಣೆ ತಿಳಿಸಿದೆ.

ಬಂಧಿತರಲ್ಲಿ ಬಹುತೇಕ ಭಯೋತ್ಪಾದಕರು ಟಿಟಿಪಿ ಸಂಘಟನೆಯೊಂದಿಗೆ ನಂಟು ಹೊಂದಿದ್ದರು. ಕೆಲವರು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ(ಬಿಎಲ್ಎ) ಮತ್ತು ಇತರ ನಿಷೇಧಿತ ಸಂಘಟನೆಗಳಿಗೆ ಸೇರಿದವರಾಗಿದ್ದಾರೆ. ಬಂಧಿತರಿಂದ 630 ಗ್ರಾಂ ಸ್ಫೋಟಕ, 17 ಡಿಟೊನೇಟರ್ಸ್, ಕಚ್ಚಾಬಾಂಬ್ ಸೇರಿದಂತೆ ಭಯೋತ್ಪಾದಕ ಕೃತ್ಯಗಳಿಗೆ ಬಳಸಲಾಗುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.