ಜೊಹಾನಸ್‌ಬರ್ಗ್: ಭಾರತದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಲ್ಲಿನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಇಂಡಿಯಾ ಡೇ’ನಲ್ಲಿ 15,000ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ದಕ್ಷಿಣ ಆಫ್ರಿಕಾದ ಆರ್ಥಿಕ ಕೇಂದ್ರವಾದ ಜೊಹಾನ್ಸ್‌ಬರ್ಗ್‌ನಲ್ಲಿ ನೆಲೆಸಿರುವ ವಲಸಿಗ ಭಾರತೀಯರನ್ನು ಒಳಗೊಂಡಿರುವ ‘ಇಂಡಿಯಾ ಕ್ಲಬ್’ ಈ ಕಾರ್ಯಕ್ರಮ ಆಯೋಜಿಸಿತ್ತು. 12 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಿತು.
ದಕ್ಷಿಣ ಆಫ್ರಿಕಾದಲ್ಲಿ ಸಂಘಗಳನ್ನು ಕಟ್ಟಿಕೊಂಡಿರುವ ಭಾರತದ ಮೂಲದವರ ಮನರಂಜನೆಗೆ ಈ ಸಮಾರಂಭ ಸಾಕ್ಷಿಯಾಯಿತು. ಇದರಲ್ಲಿ ದಕ್ಷಿಣ ಆಫ್ರಿಕಾದ ಸ್ಥಳೀಯ ಕಲಾವಿದರೂ ಭಾಗವಹಿಸಿದ್ದರು.
ದಕ್ಷಿಣ ಆಫ್ರಿಕಾದ ಹಲವಾರು ಭಾರತೀಯ ಕಂಪನಿಗಳು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಒಳಗೊಂಡ ಮಳಿಗೆಗಳನ್ನು ಸಮಾರಂಭದಲ್ಲಿ ತೆರೆದಿದ್ದವು. ಭಾರತ ಮತ್ತು ದಕ್ಷಿಣ ಆಫ್ರಿಕಾದ ಆಹಾರ ಮಳಿಗೆಗಳ ಎದುರು ಜನ ಸರತಿಯಲ್ಲಿ ನಿಂತಿದ್ದು ಕಂಡು ಬಂತು.
ಈ ಸಮಾರಂಭವನ್ನು ಇಂಡಿಯಾ ಕ್ಲಬ್ ನಿರಂತರವಾಗಿ ಆಚರಿಸಿಕೊಂಡು ಬರುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.