ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಕ್ರೇನ್‌ನ ಎರಡು ನಗರದ ಮೇಲೆ ರಷ್ಯಾ ದಾಳಿ: ಮೂವರು ಸಾವು

Published 10 ಆಗಸ್ಟ್ 2024, 8:27 IST
Last Updated 10 ಆಗಸ್ಟ್ 2024, 8:27 IST
ಅಕ್ಷರ ಗಾತ್ರ

ಕೀವ್‌: ಉಕ್ರೇನ್‌ನ ಡೋನ್‌ಸ್ಟಕ್‌ ಹಾಗೂ ಹಾರ್ಕೀವ್‌ ವಲಯದ ಮೇಲೆ ರಷ್ಯಾ ನಡೆಸಿದ ದಾಳಿಯಿಂದಾಗಿ ಮೂವರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಡೋನ್‌ಸ್ಟಕ್‌ ವಲಯದ ಕ್ರಮಾಟೊರಸ್ಕ್ ನಗರದ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದಾಗಿ ಓರ್ವ ನಾಗರಿಕ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಗವರ್ನರ್ ತಿಳಿಸಿದ್ದಾರೆ.

‘ಇಂದು ಬೆಳಿಗ್ಗೆ ರಷ್ಯಾದ ಕ್ಷಿಪಣಿಯು ನಗರದ ಪ್ರಮುಖ ಕಟ್ಟಡದ ಮೇಲೆ ದಾಳಿ ನಡೆಸಿದೆ. ಅದಕ್ಕೆ ತೀವ್ರ ಹಾನಿಯುಂಟಾಗಿದೆ’ ಎಂದು ಅಧಿಕಾರಿಗಳು ಟೆಲಿಗ್ರಾಂ ಚಾನಲ್ ಮೂಲಕ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ ಹಾರ್ಕೀವ್‌ ವಲಯದ ಮನೆಯೊಂದರ ಮೇಲೆ ರಷ್ಯಾ ನಡೆಸಿದ ದಾಳಿಯಿಂದಾಗಿ ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಕ್ರೇನ್‌ನ ಪೂರ್ವ ವಲಯವನ್ನು ಗುರಿಯಾಗಿಸಿಕೊಂಡು ರಷ್ಯಾ ನಿರಂತರ ದಾಳಿ ನಡೆಸುತ್ತಿದೆ. ಶುಕ್ರವಾರ ಕೊಸ್ತಿಯಾಂಟಿನಿಕ್ವ ನಗರದಲ್ಲಿರುವ ಸೂಪರ್ ಮಾರ್ಕೆಟ್‌ ಮೇಲೆ ರಷ್ಯಾ ನಡೆಸಿದ ದಾಳಿಯಿಂದಾಗಿ 14 ಮಂದಿ ಸಾವಿಗೀಡಾಗಿ, 43 ಮಂದಿ ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT