ಪೆಶಾವರ: ಅಫ್ಗಾನಿಸ್ಥಾನ ಭಾಗದಿಂದ ಭಯೋತ್ಪಾದಕರು ನಡೆಸಿದ ದಾಳಿಯಿಂದ ಪಾಕಿಸ್ತಾನ ಭದ್ರತಾ ಪಡೆಯ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಗಡಿ ಭದ್ರತಾ ಪಡೆಯ ನೆಲೆಯ ಮೇಲೆ ಸೋಮವಾರ ಬೆಳಗಿನ ಜಾವ ದಾಳಿ ನಡೆದಿದೆ. ಭಯೋತ್ಪಾದಕರು ಹಾಗೂ ಭದ್ರತಾ ಪಡೆಯವರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗಾರ್ಡೊ ಸೆಕ್ಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.