ಬ್ಯಾಟನ್ ರೂಜ್(ಅಮೆರಿಕ): ಇಲ್ಲಿನ ಲೂಸಿಯಾನ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 3 ವರ್ಷದ ಮಗುವೊಂದು ಮೃತಪಟ್ಟಿದೆ.ಮಗುವನ್ನುಇಬ್ರಿ ಕೊಂಬ್ಸ್ ಎಂದು ಗುರುತಿಸಲಾಗಿದೆ.

ಕಾರಿನ ಮೂಲಕ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮತ್ತೊಂದು ವಾಹನದೊಳಗಿದ್ದ 3 ವರ್ಷದ ಮಗುವಿಗೆ ಗುಂಡು ತಗುಲಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಗುಂಡಿನ ದಾಳಿ ವೇಳೆ ವಾಹನವೊಂದು ಅಪಘಾತಗೀಡಾಗಿದ್ದು, ಚಾಲಕನಿಗೆ ಗಂಭೀರ ಗಾಯಾಗಳಾಗಿವೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದುಬ್ಯಾಟನ್ ರೂಜ್ ಪೊಲೀಸರು ಹೇಳಿದ್ದಾರೆ.

ಗುಂಡಿನ ದಾಳಿ ನಡೆಸಲು ಬಳಸಲಾದ ಕಾರಿನ ಬಗ್ಗೆ ಇನ್ನೂ ಮಾಹಿತಿ ಲಭ್ಯವಿಲ್ಲ. ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಘಟನೆಯನ್ನು ಅಲ್ಲಿನ ಮೇಯರ್ ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.