ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ: ಕೋವಿಡ್‌ ಲಸಿಕೆ ಸ್ಪುಟ್ನಿಕ್ ಅಭಿವೃದ್ಧಿಗೆ ಶ್ರಮಿಸಿದ್ದ ವಿಜ್ಞಾನಿ ಹತ್ಯೆ

Last Updated 4 ಮಾರ್ಚ್ 2023, 11:00 IST
ಅಕ್ಷರ ಗಾತ್ರ

ಮಾಸ್ಕೊ: ಕೋವಿಡ್‌ ಲಸಿಕೆ ‘ಸ್ಪುಟ್ನಿಕ್‌’ಅನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ರಷ್ಯಾ ವಿಜ್ಞಾನಿ ಆ್ಯಂದ್ರೆ ಬೊಟಿಕೋವ್‌ ಅವರನ್ನು ಕೊಲೆ ಮಾಡಲಾಗಿದೆ ಎಂದು ಟಿಎಎಸ್‌ಎಸ್‌ ಎಂಬ ಸುದ್ದಿಸಂಸ್ಥೆ ಶನಿವಾರ ವರದಿ ಮಾಡಿದೆ.

‘ಬೊಟಿಕೋವ್‌ ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಕುತ್ತಿಗೆಗೆ ಬೆಲ್ಟ್‌ ಬಿಗಿದು ಅವರನ್ನು ಗುರುವಾರ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ’ ಎಂದು ವರದಿ ಮಾಡಿದೆ.

47 ವರ್ಷದ ಬೊಟಿಕೋವ್ ಅವರು ಗಾಮಲೆಯಾ ನ್ಯಾಷನಲ್ ರಿಸರ್ಚ್ ಸೆಂಟರ್‌ ಫಾರ್ ಇಕೊಲಾಜಿ ಅಂಡ್ ಮ್ಯಾಥೆಮ್ಯಾಟಿಕ್ಸ್ ನಲ್ಲಿ ಹಿರಿಯ ಸಂಶೋಧಕರಾಗಿದ್ದರು. ಕೋವಿಡ್‌ ಲಸಿಕೆ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ 2021ರಲ್ಲಿ ಅವರಿಗೆ ದೇಶದ ‘ಆರ್ಡರ್‌ ಆಫ್‌ ಮೆರಿಟ್’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT