ವಾಷಿಂಗ್ಟನ್: ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದದ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆಗಾಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಜೊತೆಗೆ, ಎರಡೂ ದೇಶಗಳ ವ್ಯಾಪಾರ ಅಧಿಕಾರಿಗಳು ಸಹ ಮಾತುಕತೆ ನಡೆಸುತ್ತಿದ್ದಾರೆ ಎಂದು ಶ್ವೇತಭವನ ಮಂಗಳವಾರ ತಿಳಿಸಿದೆ.

‘ಅಧ್ಯಕ್ಷರು ಮತ್ತು ಅವರ ವ್ಯಾಪಾರ ತಂಡವು ಭಾರತದೊಂದಿಗೆ ಗಂಭೀರ ಚರ್ಚೆಗಳನ್ನು ನಡೆಸುತ್ತಿದೆ’ಎಂದು ಶ್ವೇತಭವನದ ವಕ್ತಾರೆ ಕ್ಯಾರೋಲಿನ್ ಲೀವಿಟ್ ಸುದ್ದಿಗಾರರಿಗೆ ತಿಳಿಸಿದರು. ಅಧ್ಯಕ್ಷರಿಗೆ ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವವಿದೆ ಎಂದು ನನಗೆ ತಿಳಿದಿದೆ ಮತ್ತು ಅವರು ಆಗಾಗ್ಗೆ ಮೋದಿ ಜೊತೆಗೆ ಮಾತನಾಡುತ್ತಾರೆ ಎಂದೂ ಹೇಳಿದ್ದಾರೆ.

ಕಳೆದ ವಾರ ದಕ್ಷಿಣ ಕೊರಿಯಾದಲ್ಲಿ ಮಾತನಾಡಿದ್ದ ಟ್ರಂಪ್, ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳಲು ಬಯಸಿರುವುದಾಗಿ ಹೇಳಿದ್ದರು.

ರಷ್ಯಾದಿಂದ ಭಾರತ ತೈಲವನ್ನು ಖರೀದಿಸಿದ್ದಕ್ಕೆ ದಂಡವಾಗಿ ಭಾರತೀಯ ಆಮದುಗಳ ಮೇಲಿನ ಸುಂಕವನ್ನು ಅಮೆರಿಕ ಶೇ 50ಕ್ಕೆ ದ್ವಿಗುಣಗೊಳಿಸಿದ ನಂತರ ಟ್ರಂಪ್ ಹೇಳಿಕೆ ಉಭಯ ದೇಶಗಳ ಸಂಬಂಧ ಸುಧಾರಿಸುವ ಬಗ್ಗೆ ಆಶಾವಾದವನ್ನು ಮೂಡಿಸಿದೆ.

ರಷ್ಯಾದ ಎರಡು ಪ್ರಮುಖ ಕಚ್ಚಾ ತೈಲ ರಫ್ತುದಾರ ಕಂಪನಿಗಳಾದ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಕಳೆದ ವಾರ ಅಮೆರಿಕ ನಿರ್ಬಂಧಗಳನ್ನು ವಿಧಿಸಿದ ನಂತರ ಭಾರತೀಯ ಕಂಪನಿಗಳು ರಷ್ಯಾದಿಂದ ತೈಲ ಆಮದನ್ನು ಕಡಿತಗೊಳಿಸಿದ್ದವು.

'ಟ್ರಂಪ್ ಅವರು ವ್ಯಾಪಾರ ಒಪ್ಪಂದದ ಬಗ್ಗೆ ತುಂಬಾ ಸಕಾರಾತ್ಮಕ ಮತ್ತು ಬಲವಾದ ಭಾವನೆ ಹೊಂದಿದ್ದಾರೆಂದು ನಾನು ಭಾವಿಸುತ್ತೇನೆ. ನಿಮಗೆ ತಿಳಿದಿರುವಂತೆ, ಅವರು ಕೆಲವು ವಾರಗಳ ಹಿಂದೆ, ಓವಲ್ ಕಚೇರಿಯಲ್ಲಿ ಶ್ವೇತಭವನದಲ್ಲಿ ಉನ್ನತ ಶ್ರೇಣಿಯ ಹಲವು ಭಾರತೀಯ-ಅಮೆರಿಕನ್ ಅಧಿಕಾರಿಗಳೊಂದಿಗೆ ದೀಪಾವಳಿ ಆಚರಿಸಿದಾಗ ಪ್ರಧಾನಿ(ನರೇಂದ್ರ ಮೋದಿ ಅವರೊಂದಿಗೆ ನೇರವಾಗಿ ಮಾತನಾಡಿದ್ದರು’ಎಂದು ಲೀವಿಟ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಅಮೆರಿಕವು ಭಾರತಕ್ಕೆ ಸೆರ್ಗಿಯೊ ಗೋರ್ನಂತಹ ಶ್ರೇಷ್ಠ ರಾಯಭಾರಿಯನ್ನು ಹೊಂದಿದ್ದು, ಅವರು ವಾಷಿಂಗ್ಟನ್ ಅನ್ನು ಉತ್ತಮವಾಗಿ ಪ್ರತಿನಿಧಿಸುತ್ತಾರೆ ಎಂದು ಅವರು ಹೇಳಿದರು.

ಕಳೆದ ತಿಂಗಳು, ಟ್ರಂಪ್ ಓವಲ್ ಕಚೇರಿಯಲ್ಲಿ ದೀಪಾವಳಿ ಆಚರಣೆಯನ್ನು ಆಯೋಜಿಸಿದ್ದರು, ಇದರಲ್ಲಿ ಅಮೆರಿಕಕ್ಕೆ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ಮತ್ತು ಭಾರತೀಯ-ಅಮೆರಿಕನ್ ವ್ಯಾಪಾರ ಮಾತುಕತೆ ನಡೆಸುತ್ತಿರುವ ಪ್ರಮುಖರು ಹಾಗೂ ಸಮುದಾಯದ ವ್ಯಕ್ತಿಗಳು ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರಿಗೂ ಕರೆ ಮಾಡಿ ಟ್ರಂಪ್ ದೀಪಾವಳಿ ಶುಭಾಶಯ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.