ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ: ವಿಚಾರಣೆ ಮುಂದೂಡಲು ಕೋರಿ ಟ್ರಂಪ್‌ ಅರ್ಜಿ

Published 13 ಫೆಬ್ರುವರಿ 2024, 15:36 IST
Last Updated 13 ಫೆಬ್ರುವರಿ 2024, 15:36 IST
ಅಕ್ಷರ ಗಾತ್ರ

ವಾಷಿಂಗ್ಟನ್: ಚುನಾವಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂದೂಡಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಟ್ರಂಪ್ ಪರ ವಕೀಲರು ಸೋಮವಾರ ಈ ಸಂಬಂಧ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಅಧ್ಯಕ್ಷೀಯ ಸ್ಥಾನದ ಚುನಾವಣಾ ಕಣದಲ್ಲುಳಿಯಲು ಅನುಮತಿಯನ್ನು ಕೋರಿ ಅರ್ಜಿ ಸಲ್ಲಿಸಿದ ನಾಲ್ಕು ದಿನದ ಬಳಿಕ ಈ ಅರ್ಜಿ ಸಲ್ಲಿಕೆಯಾಗಿದೆ. 

ಈ ಬಗ್ಗೆ ಸುಪ್ರೀಂ ಕೋರ್ಟ್‌ ಏನು ತೀರ್ಮಾನ ತೆಗೆದುಕೊಳ್ಳಲಿದೆ ಮತ್ತು ಎಷ್ಟು ಬೇಗ ನಿರ್ಧರಿಸಲಿದೆ ಎಂಬುದು ಟ್ರಂಪ್‌ ವಿರುದ್ಧದ ಪ್ರಕರಣಗಳ ತನಿಖೆ ನವೆಂಬರ್‌ ತಿಂಗಳಿಗೂ ಮೊದಲು ಮುಗಿಯಲಿದೆಯೇ ಎಂಬುದನ್ನು ನಿರ್ಧರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT