ವಾಷಿಂಗ್ಟನ್: ಇರಾನ್ನೊಂದಿಗಿನ ಕದನ ವಿರಾಮ ಮಾತುಕತೆಯಲ್ಲಿ ಚೀನಾದ ಪಾತ್ರ ಇರುವುದನ್ನು ನಾನು ನಂಬುತ್ತೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ.

ಫೆ.28ರಂದು ಆರಂಭವಾಗಿದ್ದ ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧಕ್ಕೆ ಏ.8ರಂದು ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿದೆ.

ಯುದ್ಧ ನಿಲ್ಲಿಸುವಂತೆ ಚೀನಾ, ಇರಾನ್ ಮೇಲೆ ಒತ್ತಡ ಹಾಕಿರುವ ಸಾಧ್ಯತೆ ಇರಬಹುದು ಎಂದು ಹೇಳಿದ್ದಾರೆ.

ಅಮೆರಿಕ ಮತ್ತು ಇರಾನ್ ಯುದ್ಧದ ಕದನ ವಿರಾಮವನ್ನು ನಾವು ಸ್ವಾಗತಿಸುತ್ತೇವೆ. ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾವು ಪ್ರಯತ್ನವನ್ನು ಮಾಡಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವಾಲಯವು ತಿಳಿಸಿತ್ತು.

ಪಶ್ಚಿಮ ಏಷ್ಯಾದಲ್ಲಿನ ಯುದ್ಧವನ್ನು ನಿಲ್ಲಿಸುವಂತೆ ಮತ್ತು ಕದನ ವಿರಾಮ ಮಾಡಿಕೊಳ್ಳುವಂತೆ ಚೀನಾವು ರಾಜಕೀಯ ಮತ್ತು ರಾಜತಾಂತ್ರಿಕ ಸಂಪರ್ಕಗಳಿಂದ ನಿರಂತರವಾಗಿ ಮಾತುಕತೆ ನಡೆಸುತ್ತಿತ್ತು ಎಂದು ವಿದೇಶಾಂಗ ವಕ್ತಾರೆ ಮಾವೋ ನಿಂಗ್ ಹೇಳಿದ್ದರು.

ಆದರೆ, ಕದನ ವಿರಾಮದಲ್ಲಿ ಚೀನಾದ ಪಾತ್ರವೇನು ಮತ್ತು ಯಾವ ವಿಷಯಗಳ ಕುರಿತು ಮಾತುಕತೆ ನಡೆಸಲಾಗಿತ್ತು ಎನ್ನುವ ವಿಷಯ ಬಹಿರಂಗಗೊಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.