ಟ್ರಂಪ್ ಭದ್ರತೆ ಕುರಿತು ಚರ್ಚಿಸಲಿರುವ ಶ್ವೇತಭವನ
ಗುಂಡಿನ ದಾಳಿಯ ಬೆನ್ನಲ್ಲೇ ಅಧ್ಯಕ್ಷರ ಭದ್ರತೆಯ ಕುರಿತಂತೆ ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥೆ ಸುಸಿ ವೈಲ್ಸ್ ಅವರು ಈ ವಾರ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಟ್ರಂಪ್ ಸೇರಿದಂತೆ ಅತ್ಯುನ್ನತ ನಾಯಕರು ಭಾಗವಹಿಸುವ ಸಮಾರಂಭಗಳಲ್ಲಿ ಅನುಸರಿಸಬೇಕಾದ ಶಿಷ್ಟಾಚಾರ ಕುರಿತಂತೆ ಅಮೆರಿಕದ ಸೀಕ್ರೆಟ್ ಸರ್ವೀಸ್ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ’ ಎಂದು ಅವರು ಹೇಳಿದ್ದಾರೆ.