ವಾಷಿಂಗ್ಟನ್/ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಮಾತುಕತೆಗಳು ಚುರುಕುಗೊಂಡ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಪ್ರಕ್ರಿಯೆಯನ್ನು ತರಾತುರಿಯಾಗಿ ನಡೆಸದಂತೆ ತಮ್ಮ ದೇಶದ ಮಧ್ಯಸ್ಥಿಕೆದಾರರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

ಇದೇ ವೇಳೆ ಸಮಯ ನಮ್ಮ ಪರವಾಗಿದೆ ಎಂದೂ ಅವರು ತಮ್ಮ ದೇಶದ ಮಧ್ಯಸ್ಥಿಕೆದಾರರಿಗೆ ತಿಳಿಸಿದ್ದಾರೆ. ಇರಾನ್ ಜೊತೆಗಿನ ಒಪ್ಪಂದವು ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ ಎಂದು ಟ್ರಂಪ್ ಸುಳಿವು ನೀಡಿದ ಕೇವಲ ಒಂದು ದಿನದ ಬಳಿಕ ಈ ಹೇಳಿಕೆ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ.
.Israel-Lebanon Conflict: ನೆತನ್ಯಾಹು–ಟ್ರಂಪ್ ಮಾತುಕತೆ.ಕೀವ್ ಮೇಲೆ ಹೈಪರ್ಸಾನಿಕ್ ಒರಶ್ನಿಕ್ ಕ್ಷಿಪಣಿ ದಾಳಿ ನಡೆಸಿದ ರಷ್ಯಾ.
ತಮ್ಮ ಸಾಮಾಜಿಕ ಮಾಧ್ಯಮ 'ಟ್ರುತ್ ಸೋಷಿಯಲ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್, ಒಪ್ಪಂದವು ಪೂರ್ಣಗೊಂಡು, ಸಹಿಯಾಗುವವರೆಗೆ ಇರಾನ್ ಮೇಲಿನ ದಿಗ್ಬಂಧನವು ಪೂರ್ಣ ಪ್ರಮಾಣದಲ್ಲಿ ಜಾರಿಯಲ್ಲಿರಲಿದೆ ಎಂದಿದ್ದಾರೆ.

ʼಇದರಲ್ಲಿ ಯಾವುದೇ ತಪ್ಪುಗಳಿಗೆ ಆಸ್ಪದವಿರಬಾರದು! ಇರಾನ್ನೊಂದಿಗಿನ ನಮ್ಮ ಬಾಂಧವ್ಯವು ಈಗ ಹೆಚ್ಚು ವೃತ್ತಿಪರ ಹಾಗೂ ಉತ್ಪಾದಕವಾಗುತ್ತಿದೆ. ಅವರು ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಅಥವಾ ಬಾಂಬ್ ಅನ್ನು ಅಭಿವೃದ್ಧಿಪಡಿಸಲು ಅಥವಾ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಇದುವರೆಗೆ ಸಹಕಾರ ನೀಡಿದ ಪಶ್ಚಿಮ ಏಷ್ಯಾದ ಎಲ್ಲಾ ದೇಶಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆʼ ಎಂದು ಟ್ರಂಪ್ ಹೇಳಿದ್ದಾರೆ.
.ಬೆಂಗಳೂರು: ಉಬರ್ ಚಾಲಕನ ಮೇಲೆ ಮನಸೋಇಚ್ಛೆ ಹಲ್ಲೆ .ಬೆಂಗಳೂರು: ಸ್ಯಾಂಕಿ ಕೆರೆ ಉಳಿಸುವಂತೆ ಆಗ್ರಹಿಸಿ ಪ್ರತಿಭಟನೆ .
ಶೀಘ್ರದಲ್ಲೇ ಸಿಹಿ ಸುದ್ದಿ: ಮಾರ್ಕೊ ರೂಬಿಯೊ

ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ನವದೆಹಲಿಯಲ್ಲಿ ಮಾತನಾಡಿ, ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಇರಾನ್ನೊಂದಿಗೆ ನಡೆಯುತ್ತಿರುವ ಮಾತುಕತೆಯಲ್ಲಿ ಅಮೆರಿಕ ಗಣನೀಯ ಪ್ರಗತಿ ಸಾಧಿಸಿದೆ. ವಾಣಿಜ್ಯ ಹಡಗುಗಳ ಸಂಚಾರಕ್ಕಾಗಿ 'ಹೊರ್ಮುಜ್ ಜಲಸಂಧಿ'ಯನ್ನು ಸಂಪೂರ್ಣವಾಗಿ ಮುಕ್ತಗೊಳಿಸುವುದು ಸಹ ಇದರಲ್ಲಿ ಸೇರಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.